ಚಿತ್ರದುರ್ಗ: ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವತಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅದಕ್ಕಾಗಿ ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ತಮ್ಮ ಮಕ್ಕಳು ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದವರು ಮೇ-31ರ ಒಳಗಾಗಿ ಆನ್‍ಲೈನ್ ಮೂಲಕ https://ksgeanews.blogspot.comಅರ್ಜಿ ನೋಂದಾಯಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘ ಚಿತ್ರದುರ್ಗ ಜಿಲ್ಲಾ ಶಾಖೆ ಜಿಲ್ಲಾಧ್ಯಕ್ಷರಾದ ಮಾಲತೇಶ್ ಮುದ್ದಜ್ಜಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಬಂಧಿಸಿದ ಜಿಲ್ಲಾ/ತಾಲ್ಲೂಕು ಶಾಖೆಯ ಅಧ್ಯಕ್ಷರ ರುಜು ಮೊಹರಿನೊಂದಿಗೆ ದೃಢೀಕರಿಸಿ ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಬೇಕು ಎಂದು ಮನವಿ ಮಾಡಿದ್ದಾರೆ.