ನವದೆಹಲಿ : ಪಾಕಿಸ್ತಾನಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿರುವ ಭಾರತ, ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ಭಾರತದ ವಿರುದ್ಧದ ಯುದ್ಧ ಕೃತ್ಯವೆಂದು ಪರಿಗಣಿಸಲಾಗುತ್ತದೆ ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
2 ದಿನಗಳಿಂದ ಪಾಕಿಸ್ತಾನ ಭಾರತದ ಮೇಲೆ ಡ್ರೋನ್ ಮತ್ತು ಶೆಲ್ ದಾಳಿ ನಡೆಸುತ್ತಿದೆ. ಆ ದಾಳಿಯ ಪ್ರಯತ್ನಗಳನ್ನೆಲ್ಲ ಭಾರತೀಯ ಸೇನೆ ವಿಫಲಗೊಳಿಸುತ್ತಿದೆ. ಆದರೂ ಭಾರತದೊಳಗೆ ಪ್ರವೇಶಿಸಲು ಪ್ರಯತ್ನಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ಕೊನೆಯ ಎಚ್ಚರಿಕೆ ನೀಡಿದೆ. ಭಾರತದ ಮೇಲೆ ಭವಿಷ್ಯದಲ್ಲಿ ಪಾಕಿಸ್ತಾನದಿಂದ ನಡೆಯುವ ಭಯೋತ್ಪಾದಕ ದಾಳಿಗಳನ್ನು ಯುದ್ಧದ ಕೃತ್ಯಗಳೆಂದು ಪರಿಗಣಿಸಲಾಗುವುದು ಎಂದು ಭಾರತ ಸರ್ಕಾರ ಘೋಷಣೆ ಮಾಡಿದೆ.
ಪಾಕಿಸ್ತಾನ ಎರಡು ದಿನಗಳ ಕಾಲ ಡ್ರೋನ್ ಮತ್ತು ಕ್ಷಿಪಣಿ ದಾಳಿಗೆ ಪ್ರಯತ್ನಿಸಿದ ನಂತರ ಭಾರತ ಸರ್ಕಾರ ಈ ಹೇಳಿಕೆ ನೀಡಿದೆ. ಪಾಕಿಸ್ತಾನದ ಡ್ರೋನ್ ದಾಳಿಯನ್ನು ಪ್ರಚೋದನಕಾರಿ ಕೃತ್ಯ ಎಂದು ವಿದೇಶಾಂಗ ಇಲಾಖೆ ಟೀಕೆ ಮಾಡಿದೆ.