ಚಿತ್ರದುರ್ಗ; ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗದ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ಲಾರಿ ಡಿಕ್ಕಿಯಾಗಿ ಇನ್ನೋವಾ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೊಳಲ್ಕೆರೆಯಿಂದ ಚಿತ್ರದುರ್ಗದ ಕಡೆ ಬರುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಪುರುಷರು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.