ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ ಎಂದು ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಆಪರೇಷನ್ ಸಿಂಧೂರ ಅಡಿಯಲ್ಲಿ ಎಚ್ಚರಿಕೆಯಿಂದ ಚರ್ಚಿಸಿದ ನಂತರ ಭಾರತೀಯ ವಾಯುಪಡೆ(ಐಎಎಫ್) ಪಾಕಿಸ್ತಾನದಲ್ಲಿ 9 ಭಯೋತ್ಪಾದಕ ಕೇಂದ್ರಗಳನ್ನು ಟಾರ್ಗೆಟ್ ಮಾಡಿತು. ಇದರಲ್ಲಿ ಐಸಿ 814 ಹೈಜಾಕ್ ಮತ್ತು ಪುಲ್ಟಾಮಾ ಸ್ಫೋಟದಲ್ಲಿ ಭಾಗಿಯಾಗಿದ್ದ ಯೂಸುಫ್ ಅಜರ್, ಅಬ್ದುಲ್ ಮಲಿಕ್ ರೌಫ್ ಮತ್ತು ಮುದಾಸೀರ್ ಅಹ್ಮದ್ ಅವರಂತಹ ಭಯೋತ್ಪಾಕರು ಸೇರಿ 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಮೇಲೆ ಭಾರತ ನಡೆಸಿದ ಮಿಲಿಟರಿ ದಾಳಿಗಳು ಭಯೋತ್ಪಾದಕರನ್ನು ಕೊಲ್ಲುವ ಉದ್ದೇಶವನ್ನು ಹೊಂದಿದ್ದವು. ಭಾರತವು ಪಾಕಿಸ್ತಾನದ ನಾಗರಿಕರನ್ನು ಗುರಿಯಾಗಿಸಿ ಯಾವುದೇ ದಾಳಿ ಮಾಡಿಲ್ಲ. ಆದರೆ, ಪಾಕಿಸ್ತಾನವು ಭಾರತದಲ್ಲಿ ನಾಗರಿಕರನ್ನು ಗುರಿಯಾಗಿಸಿ ದಾಳಿ ಮಾಡಿದೆ ಎಂದರು.
ಪಾಕಿಸ್ತಾನ ನಡೆಸಿದ ಡ್ರೋನ್ ದಾಳಿಗಳನ್ನು ಹಿಮ್ಮೆಟ್ಟಿಸುವಲ್ಲಿ ಭಾರತದ ವಾಯು ರಕ್ಷಣಾ ಪಡೆ ಯಶಸ್ವಿಯಾಗಿದೆ. ಜೊತೆಗೆ ಪ್ರತಿದಾಳಿ ಕೂಡ ನಡೆಸಿದೆ. ಪಾಕಿಸ್ತಾನದ ಲಾಹೋರ್ನಲ್ಲಿರುವ ರೆಡಾರ್ ಸ್ಥಾಪನೆಯನ್ನು ನಾಶಪಡಿಸಿದೆ. ಪಾಕಿಸ್ತಾನದ 35 ರಿಂದ 40 ಯೋಧರ ಮೃತಪಟ್ಟಿದ್ದು, ಪ್ರತಿ ದಾಳಿಯಲ್ಲೂ ಪಾಕಿಸ್ತಾನದ ಸೇನಾಧಿಕಾರಿಗಳು ಮೃತಪಟ್ಟಿದ್ದಾರೆ. ಪಾಕಿಸ್ತಾನದ ದಾಳಿಯನ್ನು ತಡೆಯಲು ಸೇನೆಯು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ವಿವರಿಸಿದರು.