ಬೆಂಗಳೂರು : ಸರ್ಕಾರದಿಂದಲೇ ಇನ್ನು 108 ಆ್ಯಂಬುಲೆನ್ಸ್ ಸೇವೆ ನೀಡಲಾಗುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಸಂಪೂರ್ಣ ಸೇವೆ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಗುಂಡುರಾವ್, ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸೇವೆ ನೀಡುತ್ತದೆ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. 108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ವಿಚಾರವಾಗಿ ಮಾತನಾಡಿದ ಅವರು, ಇದು ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದಿದ್ದಾರೆ.
30 ಸಾವಿರ ಸಿಬ್ಬಂದಿ ವೇತನವಾಗದ ವಿಚಾರವಾಗಿ, 2023-24 ರಲ್ಲಿ ಓಪನಿಂಗ್ ಬ್ಯಾಲೆನ್ಸ್ ಹೆಚ್ಚು ಇರ್ತಾ ಇತ್ತು. ಆದರೆ ಕಳೆದ ವರ್ಷದಿಂದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ಸ್ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಇನ್ನೇರಡು ಮೂರು ದಿನಗಳಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆ ಹಿಡದಿಲ್ಲ ಎಂದು ಹೇಳಿದ್ದಾರೆ.