ಬೆಂಗಳೂರು :ರಾಜಧಾನಿ ಬೆಂಗಳೂರಿನ ಆಡಳಿತದ ಹೊಣೆ ಹೊತ್ತಿದ್ದ ಬಿಬಿಎಂಪಿಗೆ ಕೊಕ್ ನೀಡಿ ನಾಳೆಯಿಂದ (ಮೇ 15) ಗ್ರೇಟರ್ ಬೆಂಗಳೂರು ಜಾರಿ ಆಗಲಿದೆ. ಆ ಮೂಲಕ ಬಿಬಿಎಂಪಿ ಗ್ರೇಟರ್ ಬೆಂಗಳೂರು ಅಥಾರಿಟಿ ಆಗಲಿದೆ.
ಮೇ 5ರಿಂದ ಗ್ರೇಟರ್ ಬೆಂಗಳೂರು ಜಾರಿಗೆ ಬರುವಂತೆ ಸರ್ಕಾರ ಬುಧವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ಗೆ ಉಪಾಧ್ಯಕ್ಷರಾಗಲಿದ್ದಾರೆ.
ಈಗಾಗಲೇ ಗ್ರೇಟರ್ ಬೆಂಗಳೂರಿಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಇದರ ಬೆನ್ನಲ್ಲೇ ಸರ್ಕಾರ ನಾಳೆ (ಮೇ 15)ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ತಯಾರಿ ನಡೆಸಿತ್ತು. ಹಾಗಾಗಿ ನಾಳೆಯಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ಥಿತ್ವಕ್ಕೆ ಬರುತ್ತಿದೆ. ಆ ಮೂಲಕ ರಾಜಧಾನಿ ಬೆಂಗಳೂರಿನ ಆಡಳಿತದ ಚಿತ್ರಣವೇ ಬದಲಾಗಲಿದೆ. ಬೆಂಗಳೂರಿನ ಪ್ರಾದೇಶಿಕತೆ-ಭೌಗೋಳಿಕತೆಯ ವ್ಯಾಪ್ತಿ-ವಿಸ್ತೀರ್ಣ ಕೂಡ ಹೆಚ್ಚಾಗಲಿದೆ.