ಬೆಂಗಳೂರು: ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ ಅವರು 150 ಮೆಂಟೇನರ್ ಹುದ್ದೆಗಳಿಗಾಗಿ ಐ.ಟಿ.ಐ ಅಥವಾ ಎನ್.ಸಿ.ವಿ.ಟಿ/ಎನ್.ಸಿ.ಟಿ.ವಿ.ಟಿ/ಎನ್.ಎ.ಸಿ ಗೆ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಮತ್ತು 50 ವರ್ಷದ ಒಳಗಿನ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ.22 ಅರ್ಜಿ ಸಲ್ಲಿಸಲು ಕೊನೆಯ ದಿನ.
ವೇತನ 25000-59060 (ವಾರ್ಷಿಕ ಬಡ್ತಿ ಶೇ.3%) ಮತ್ತು ಬಿ.ಎಮ್.ಆರ್.ಸಿ.ಎಲ್ ನ, ಒ ಮತ್ತು ಎಮ್ ವಿಂಗ್‍ಗೆ ಲಭ್ಯವಿರುವ ಇತರೆ ಭತ್ಯೆಗಳು, ಹುದ್ದೆಗಳು 05 ವರ್ಷಗಳ ಅವಧಿಗೆ ಗುತ್ತಿಗೆ ಆಧಾರವಾಗಿದ್ದು, ನಂತರ ವೈಯಕ್ತಿಕ ಕಾರ್ಯಕ್ಷಮತೆಗೆ ಅನುಗುಣವಾಗಿ ಗುತ್ತಿಗೆ ಅವಧಿಯನ್ನು ವಿಸ್ತರಿಸಲಾಗುವುದು,
ಅರ್ಜಿಯನ್ನು ವೆಬ್‍ಸೈಟ್ www.bmrc.co.in./careers ನಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ e-mಚಿiಟ ([email protected]) ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.