ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ರಾಜ್ಯದಾದ್ಯಂತ 40 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ.
ರಾಜ್ಯದಲ್ಲಿ ಏಳು ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಈ ಮೂಲಕ ಮತ್ತೆ ಭಷ್ಟ್ರ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರೆದಿದೆ.
ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮಂಗಳೂರು, ಯಾದಗಿರಿ, ವಿಜಯಪುರ, ತುಮಕೂರು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 7 ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲುಸುತ್ತಿದ್ದಾರೆ.
ರಾಜ್ಯದಾದ್ಯಂತ 7 ಅಧಿಕಾರಿಗಳಿಗೆ ಸೇರಿದಂತೆ ಮನೆ, ಕಚೇರಿ, ಗೋಡೋನ್, ಸಂಬಂಧಿಕರ ಮನೆಗಳು ಸೇರಿದಂತೆ 40 ಕಡೆಗಳಲ್ಲಿ ದಾಳಿ ಮಾಡಲಾಗಿದೆ. ಎಲ್ಲೇಲ್ಲಿ :
ಬೆಂಗಳೂರಿನ 12 ಕಡೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 8 ಕಡೆ, ಯಾದಗಿರಿ 5, ವಿಜಯಪುರ 4 ಹಾಗೂ ಮಂಗಳೂರಿನ 4 ಕಡೆ ಸೇರಿದಂತೆ 40 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಯಾರ ಮೇಲೆ ದಾಳಿ :
1) ರಾಜಶೇಖರ್, ನಿರ್ಮಿತಿ ಕೇಂದ್ರದ ನಿರ್ದೇಶಕರು, ತುಮಕೂರು.
2) ಮಂಜುನಾಥ್, ಸರ್ವೆ ಮೇಲ್ವಿಚಾರಕರು, ದ.ಕ. ಮಂಗಳೂರು.
3) ರೇಣುಕಾ. ಸಾತರ್ಲೆ, ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಿಜಯಪುರ.
4) ಮುರಳಿ ಟಿವಿ, ಹೆಚ್ಚುವರಿ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ, ಬೆಂಗಳೂರು ನಗರ.
5) ಎಚ್ ಆರ್ ನಟರಾಜ್, ಇನ್ಸ್ಪೆಕ್ಟರ್, ಕಾನೂನು ಮಾಪನಶಾಸ್ತ್ರ, ಬೆಂಗಳೂರು.
6) ಅನಂತ್ ಕುಮಾರ್ SDA, ಹೊಸಕೋಟೆ ತಾಲೂಕು ಕಛೇರಿ,ಬೆಂಗಳೂರು ಗ್ರಾಮಾಂತರ.
7) ಉಮಾಕಾಂತ್, ಶಹಾಪುರ ತಾಲೂಕು, ಯಾದಗಿರಿ.