ಮಣಿಪುರದಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಹತ್ತು ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಭಾರತ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಚಂದೇಲ್ ಜಿಲ್ಲೆಯ ನ್ಯೂ ಸಮ್ತಾಲ್ ಗ್ರಾಮದ ಬಳಿ ಸಶಸ್ತ್ರ ಉಗ್ರಗಾಮಿಗಳ ಚಲನವಲನದ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಅಸ್ಸಾಂ ರೈಫಲ್ಸ್ ಘಟಕವು ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಉಗ್ರರು ಸೈನಿಕರ ಮೇಲೆ ಗುಂಡು ಹಾರಿಸಿದರು. ಅದಕ್ಕೆ ಅವರು ಪ್ರತಿದಾಳಿ ನಡೆಸಿ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ 10 ಬಂಡೂಕೋರರನ್ನು ಸದೆಬಡಿಯಲಾಗಿದೆ.
ಈ ಬಗ್ಗೆ ಪೂರ್ವ ಸೇನೆಯ ಕಮಾಂಡ್ ಪೋಸ್ಟ್ ಮಾಡುವ ಮೂಲಕ ದಾಳಿ ಬಗ್ಗೆ ಖಚಿತ ಪಡಿಸಿದ್ದಾರೆ.
ಕಾರ್ಯಾಚರಣೆಯ ಸಮಯದಲ್ಲಿ, ಶಂಕಿತ ಉಗ್ರರು ಸೈನಿಕರ ಮೇಲೆ ಗುಂಡು ಹಾರಿಸಿದರು, ಅದಕ್ಕೆ ಸೇನೆ ತ್ವರಿತವಾಗಿ ಪ್ರತಿಕ್ರಿಯಿಸಿತು. ನಂತರದ ಗುಂಡಿನ ಚಕಮಕಿಯಲ್ಲಿ, 10 ಬಂಡುಕೋರರನ್ನು ಹೊಡೆದುರುಳಿಸಲಾಗಿದೆ. ಹತರಿಂದ ಗಣನೀಯ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಯಿತು. ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಸೇನೆ ತಿಳಿಸಿದೆ. ಮೇ 10 ರಂದು ಮಣಿಪುರದಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕನಿಷ್ಠ 13 ಉಗ್ರರನ್ನು ಬಂಧಿಸಲಾಗಿದೆ.