ಬೆಂಗಳೂರು: ಸ್ಕೂಟರ್ನಲ್ಲಿ ಬರುತ್ತಿದ್ದಾಗ ಆಯತಪ್ಪಿ ರಸ್ತೆಗೆ ಬಿದ್ದ ಯುವತಿಯ ಮೇಲೆ ಕಾರು ಹರಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದೇವತಾ (24) ಸ್ಥಳದಲ್ಲೇ ಮೃತಪಟ್ಟ ವಿದ್ಯಾರ್ಥಿನಿ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿದ್ಯಾರ್ಥಿನಿ ದೇವತಾ ಸ್ಕೂಟರ್ನಲ್ಲಿ ಬರುತ್ತಿದ್ದಾಗ ಆಯತಪ್ಪಿ ರಸ್ತೆಗೆ ಬಿದ್ದಿದ್ದಾಳೆ. ಇದೇ ವೇಳೆ ಎದುರಿನಿಂದ ಬಂದ ಕಾರು ಆಕೆಯ ಮೇಲೆ ಹರಿದು ಹೋಗಿದೆ. ಪರಿಣಾಮ ವಿದ್ಯಾರ್ಥಿನಿ ಧರಿಸಿದ್ದ ಹೆಲ್ಮೆಟ್ ಬೇರ್ಪಟ್ಟಿದ್ದರಿಂದ ಯುವತಿ ಸ್ಥಳದಲ್ಲೇ ಉಸಿರು ನಿಲ್ಲಿಸಿದ್ದಾಳೆ. ಇದನ್ನೂ ಓದಿ: ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಧನ 2,000 ರೂ. ಹೆಚ್ಚಳ ಸಿಸಿಟಿವಿಯಲ್ಲಿ ವಿದ್ಯಾರ್ಥಿನಿ ಆಯತಪ್ಪಿ ಬೀಳುವ ವಿಡಿಯೋ ಸೆರೆಯಾಗಿದೆ. ಇನ್ನೂ, ತಮಗಿದ್ದ ಒಬ್ಬಳೇ ಮಗಳನ್ನ ಕಳೆದುಕೊಂಡು ಪೋಷರು ಕಣ್ಣೀರು ಹಾಕುತ್ತಿದ್ದಾರೆ.