ಹರ್ದೋಗ್ : ಎರಡು ರೈಲುಗಳ ಹಳಿತಪ್ಪಿಸುವ ಯತ್ನ ಉತ್ತರ ಪ್ರದೇಶದ ಹರ್ದೋಮ್ ಜಿಲ್ಲೆಯಲ್ಲಿ ನಡೆದಿದೆ. ಲೋಕೋ ಪೈಲಟ್‌ಗಳ ಸಮಯಪ್ರಜ್ಞೆಯಿಂದಾಗಿ ಹಳಿ ತಪ್ಪಿಸುವ ಯತ್ನ ವಿಫಲಗೊಳಿಸಲಾಗಿದೆ ಎಂದು ವರದಿಯಾಗಿದೆ.
ಸೋಮವಾರ(ಮೇ 19) ಸಂಜೆ, ದಲೇಲ್‌ನಗರ ಮತ್ತು ಉಮರ್ತಾಲಿ ನಿಲ್ದಾಣಗಳ ನಡುವಿನ ಕಿ.ಮೀ ಮಾರ್ಕರ್ 1129/14 ಬಳಿ ದು*ಷ್ಕರ್ಮಿಗಳು ಕೃ*ತ್ಯ ಎಸಗಿದ್ದಾರೆ. ಮರದ ದಿಮ್ಮಿಗಳನ್ನು ಅರ್ಥಿಂಗ್ ವೈರ್ ಬಳಸಿ ಹಳಿಗೆ ಕಿಡಿಗೇಡಿಗಳು ಕಟ್ಟಿದ್ದರು ಎಂದು ತಿಳಿದುಬಂದಿದೆ. ಲಖನೌ ಕಡೆಗೆ ಹೋಗುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ (20504) ನ ಲೋಕೋ ಪೈಲಟ್ ಅಡಚಣೆಯನ್ನು ಗಮನಿಸಿ ತುರ್ತು ಬ್ರೇಕ್ ಹಾಕಿದರು. ಮರದ ದಿಮ್ಮಿ ತೆರವು ಮಾಡಿ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಇದನ್ನೂ ಓದಿ : ಬೆಳ್ತಂಗಡಿಯ ಆಕಾಂಕ್ಷ ನಿಗೂಢ ಸಾ*ವು ಪ್ರಕರಣ; ಸೂಕ್ತ ತನಿಖೆಗೆ ಪಂಜಾಬ್ ಸರ್ಕಾರಕ್ಕೆ ದಿನೇಶ್ ಗುಂಡೂರಾವ್ ಒತ್ತಾಯ ರಾಜಧಾನಿ ಎಕ್ಸ್‌ಪ್ರೆಸ್ ಬಳಿಕ ಕಠೋಡಮ್ ಎಕ್ಸ್‌ಪ್ರೆಸ್ (15044) ನ ಹಳಿತಪ್ಪಿಸಲು ಎರಡನೇ ಪ್ರಯತ್ನ ಮಾಡಲಾಗಿದೆ. ಲೋಕೊ ಪೈಲಟ್ ಸಮಯಪ್ರಜ್ಞೆಯಿಂದ ದುರಂ*ತ ತಪ್ಪಿದೆ. ರೈಲ್ವೆ ಪೊಲೀಸ್, ರೈಲ್ವೆ ರಕ್ಷಣಾ ಪಡೆ ಮತ್ತು ಸ್ಥಳೀಯ ಪೊಲೀಸರ ತಂಡಗಳು ದು*ಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದು, ತನಿಖೆ ನಡೆಸುತ್ತಿದ್ದಾರೆ.