ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಬ್ಯಾಕ್ಲಾಗ್ ಸೇರಿದಂತೆ ಒಟ್ಟು ಹುದ್ದೆ 2964 ಆಗಿದೆ. ಕರ್ನಾಟಕಕ್ಕೆ ಒಟ್ಟು 250 ಹುದ್ದೆಗಳನ್ನು ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು.
ವೇತನ: 48,480 -85,920ರೂ. ಮಾಸಿಕ
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ನಿಗದಿಸಲಾಗಿದ್ದು, ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಪರೀಕ್ಷೆ, ಸ್ಕ್ರೀನಿಂಗ್, ಸಂದರ್ಶನ ಮತ್ತು ಸ್ಥಳೀಯ ಭಾಷೆ ಸಾಮರ್ಥ್ಯದ ಪರೀಕ್ಷೆ ನಡೆಸಲಾಗುವುದು.
ಈ ಹುದ್ದೆಗೆ ಮೇ 9ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮೇ 29 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ bank.sbi/web/careers/current-openings ಗೆ ಭೇಟಿ ನೀಡಿ.