ಮಂಗಳೂರಿನಲ್ಲಿ ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ ಮಾಡಿರುವಂತಹ ಘಟನೆ ಹೊರವಲಯದ ವಳಚ್ಚಿಲ್ ಬಳಿ ತಡರಾತ್ರಿ ನಡೆದಿದೆ. ಆ ಮೂಲಕ ಮತ್ತೆ ಆತಂಕ ಉಂಟಾಗಿದೆ. ಮದುವೆ ವಿಚಾರಕ್ಕೆ ಗಲಾಟೆ ನಡೆದು ಸಂಬಂಧಿಯಿಂದಲೇ ವ್ಯಕ್ತಿಯ ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.
ಸಂಬಂಧಿ ಮುಸ್ತಫ ಎಂಬವರ ಮದುವೆಯನ್ನು ಸಲ್ಮಾನ್ ನೆರವೇರಿಸಿದ್ದ. ಇವರಿಬ್ಬರ ನಡುವೆ ಮದುವೆ ಸಂದರ್ಭದಲ್ಲಿ ವೈಮನಸ್ಸು ಉಂಟಾಗಿತ್ತು. ಇದೇ ವಿಚಾರವಾಗಿ ಮುಸ್ತಫ ಜೊತೆ ಮಾತುಕತೆಗೆ ತನ್ನ ಇಬ್ಬರು ಪುತ್ರರೊಂದಿಗೆ ಸಲ್ಮಾನ್ ಬಂದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಸಲ್ಮಾನ್ಗೆ ಮುಸ್ತಫ ಚೂರಿಯಿಂದ ಇರಿದಿದ್ದಾನೆ.
ಗಂಭೀರವಾಗಿ ಗಾಯಗೊಂಡಿದ್ದ ಸಲ್ಮಾನ್ನನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸದ್ಯ ಪರಾರಿಯಾದ ಮುಸ್ತಫ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.