ಬೆಂಗಳೂರು: ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದಂತ ಕೆಇಟಿ-2025ರ ಪರೀಕ್ಷೆಯ ಫಲಿತಾಂಶ ( KCET-2025 Exam Results) ಪ್ರಕಟವಾಗಲಿದೆ.
ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಮಾಹಿತಿ ಬಿಡುಗಡೆ ಮಾಡಿದ್ದು, ಇಂದು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 2 ಗಂಟೆಗೆ ಸಿಇಟಿ-2025ರ ಪರೀಕ್ಷೆಯ ( CET-2025 ) ಫಲಿತಾಂಶವನ್ನು ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ. ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು cetonline.karnataka.gov.in ಅಥವಾ kea.kar.nic.in ಜಾಲತಾಣಕ್ಕೆ ಭೇಟಿ ನೀಡುವಂತೆ ಸೂಚಿಸಿದೆ.