ಬೆಂಗಳೂರು : ಇಂಜಿನಿಯರಿಂಗ್, ಕೃಷಿ, ಪಶು ವೈದ್ಯಕೀಯ ವಿಜ್ಞಾನ ವಿಭಾಗ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.
ಇಂದು ಬೆಳಗ್ಗೆ 11.30ಕ್ಕೆ ಯುಜಿಸಿಇಟಿ-2025 ಫಲಿತಾಂಶ ಪ್ರಕಟಗೊಳ್ಳಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವೆಬ್ ಸೈಟ್ ನಲ್ಲಿ ಸಿಇಟಿ ಫಲಿತಾಂಶ ಲಭ್ಯವಿರಲಿದೆ.
ಏಪ್ರಿಲ್ 16, 17ರಂದು ಇಂಜಿನಿಯರಿಂಗ್, ಕೃಷಿ, ಪಶು ವೈದ್ಯಕೀಯ ವಿಜ್ಞಾನ ವಿಭಾಗ, ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಗೆ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.