ಬಾಗಲಕೋಟೆ : ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅಕ್ಕಿಮರಡಿ ಗ್ರಾಮದ ಯುವಕ ಪಾಂಡುರಂಗ ಸದಾಶಿವ ಕಂಬಳಿ ಅವರು ಈ ಬಾರಿಯ ಯುನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಪರೀಕ್ಷೆಯಲ್ಲಿ 529ನೇ ರ್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಅವರ ಸ್ಪೂರ್ತಿದಾಯ ಕಥೆ ಇಲ್ಲಿದೆ.
UPSC ನಾಗರಿಕ ಸೇವೆಗಳ ಪರೀಕ್ಷೆಯ 2024ನೇ ಸಾಲಿನ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿಯ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅಕ್ಕಿಮರಡಿ ಗ್ರಾಮದ ಯುವಕ ಪಾಂಡುರಂಗ ಸದಾಶಿವ ಕಂಬಳಿ ಅವರು ಯುನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಪರೀಕ್ಷೆಯಲ್ಲಿ 529ನೇ ರ್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ರೈತನ ಮಗನಾಗಿರುವ ಪಾಂಡುರಂಗ ಅವರ ಈ ಯಶಸ್ಸು ಗ್ರಾಮೀಣ ಕರ್ನಾಟಕದ ಯುವಕರಿಗೆ ಸ್ಫೂರ್ತಿಯಾಗಿದೆ. ಪಾಂಡುರಂಗ ಕಂಬಳಿ ಅವರು ಕಳೆದ ಒಂದು ವರ್ಷದಿಂದ ಐಎಫ್ಎಸ್ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಮಹಾರಾಷ್ಟ್ರ ಕೇಡರ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸತತ ಐದನೇ ಪ್ರಯತ್ನದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅವರು, ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಈ ಸಾಧನೆಯನ್ನು ಮಾಡಿದ್ದಾರೆ.
ಪಾಂಡುರಂಗ ಅವರ ಕುಟುಂಬ ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಗ್ರಾಮೀಣ ಹಿನ್ನೆಲೆಯಿಂದ ಬಂದು ದೇಶದ ಅತ್ಯಂತ ಕಠಿಣ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಕಂಡಿರುವ ಪಾಂಡುರಂಗ ಅವರ ಕತೆ, ಯುವ ಪೀಳಿಗೆಗೆ ದೊಡ್ಡ ಪ್ರೇರಣೆಯಾಗಿದೆ.