ಬೆಂಗಳೂರು : ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್ಗೆ ತೆರಳಲು ಅನುಮತಿ ಕೋರಿ ದರ್ಶನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ದರ್ಶನ್ ಸಿಆರ್ಪಿಸಿ ಸೆಕ್ಷನ್ 439(1) (ಬಿ) ಅಡಿ 57 ನೇ ಸಿಸಿಹೆಚ್ ಕೋರ್ಟ್ ಗೆ ಅರ್ಜಿ ಹಾಕಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಹೀಗಾಗಿ ಅವರು ವಿದೇಶಕ್ಕೆ ತೆರಳಿದರೆ ಭಾರತಕ್ಕೆ ಮತ್ತೆ ವಾಪಸ್ ಬರುವುದು ಅನುಮಾನ. ಆದ್ದರಿಂದ ವಿದೇಶಕ್ಕೆ ತೆರಳಲು ಅನಮತಿ ನೀಡದಂತೆ ವಿಶೇಷ ಸಾರ್ವಜನಿಕ ಅಭಿಯೋಜಕ (ಎಸ್ಪಿಪಿ) ಆಕ್ಷೇಪಣೆ ಸಲ್ಲಿಸಿದ್ದಾರೆ.
ಇನ್ನು ದರ್ಶನ್ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಕೋರ್ಟ್ನಲ್ಲಿ ನಡೆಯಲಿದೆ.