ಚಿತ್ರದುರ್ಗ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಪ್ರವರ್ಗ-3ಬಿಗೆ ಸೇರಿದ ಮರಾಠ ಮತ್ತು ಮರಾಠ ಉಪಜಾತಿಗೆ ಸೇರಿದ ಜನಾಂಗದವರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 4 ಸಂಜೆ 5:30ರ ಓಳಗಾಗಿ ಅರ್ಜಿ ಸಲ್ಲಿಸಬೇಕು.
ಈ ನಿಗಮದಡಿಯಲ್ಲಿ ಅನುಷ್ಟಾನಗೊಳಿಸುತ್ತಿರುವ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಮರಾಠ ಮಿಲ್ಟಿç ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ) ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಸ್ವಾತಂತ್ರö್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹತೆಗಳು: ಈ ಯೋಜನೆಗಳಡಿಯಲ್ಲಿ ಅರ್ಜಿ ಸಲ್ಲಿಸಬಯಸುವವರು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಇಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3(ಬಿ)ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು). ಅರ್ಜಿದಾರನು ಕರ್ನಾಟಕದ ರಾಜ್ಯದವರಾಗಿರಬೇಕು ಹಾಗೂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಸರ್ಕಾರಿ ಸೌಲಭ್ಯವನ್ನು (ಸಾಲ ಸಹಾಯಧನ) ಪಡೆಯುವ ಸಂಬAಧ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಆದರೆ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಇಬ್ಬರಿಗೆ ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ 8867537799, ದೂರವಾಣಿ ಸಂಖ್ಯೆ 080-29903994 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಿಳಾಸವನ್ನು ಹಾಗೂ ಹೆಚ್ಚಿನ ವಿವರಗಳನ್ನು https://kmcdc.karnataka.gov.in ನಲ್ಲಿ ತಿಳಿಯಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ

































