ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಅದರಂತೆ ಆಗಸ್ಟ್.11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ.
ಈ ಬಗ್ಗೆ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್.11ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ.2 ವಾರಗಳ ಕಾಲ ನಡೆಯಲಿದೆ ಎಂಬುದಾಗಿ ತಿಳಿಸಿದೆ.
ರಾಜ್ಯ ಸರ್ಕಾರವು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 11, 2025 ರಿಂದ ಎರಡು ವಾರಗಳ ಕಾಲ ವಿಧಾನಸಭೆಯ ಕಲಾಪ ನಡೆಯಲಿದೆ. ಈ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.