ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸಂಬಂಧ ಪರಿಶಿಷ್ಠ ಜಾತಿ ವಿದ್ಯಾರ್ಥಿಗಳು ಸಮಾಜ ಇಲಾಖೆ ವೆಬ್‌ಸೈಟ್‌ನಡಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿದೆ.
2025-2026ನೇ ಸಾಲಿನಿಂದ ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಲ್ಲಿ Aadhar Based Biometric Authentication and E-Kyc ಕಡ್ಡಾಯವಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ನ್ನು ಎನ್.ಪಿ.ಸಿ.ಐ ನಲ್ಲಿ ಸೀಡಿಂಗ್ ಮಾಡಿಸಬೇಕು. ಗ್ರಾಮ ಒನ್, ಕರ್ನಾಟಕ ಒನ್, ಕೇಂದ್ರಗಳಲ್ಲಿ ಹಾಗೂ ಚಳ್ಳಕೆರೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿಗೆ ಭೇಟಿ ನೀಡಿ ಸಕಾಲದಲ್ಲಿ ಇ-ಕೆವೈಸಿ ಮಾಡಿಸುವಂತೆ ಪ್ರಕಟಣೆ ತಿಳಿಸಿದೆ.