ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಅದಕ್ಕೂ ಮುನ್ನ ವೃದ್ಧರು, ಅಂಗವಿಕಲರು ಮತ್ತು ವಿಧವೆಯರಿಗೆ ಮಾಸಿಕ ಪಿಂಚಣಿಯನ್ನು 400 ರೂ.ನಿಂದ 1,100 ರೂ.ಗೆ ಹೆಚ್ಚಿಸುವುದಾಗಿ ಸಿಎಂ ನಿತೀಶ್ ಕುಮಾರ್ ಅವರು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.
ಜುಲೈನಿಂದಲೇ ಈ ನಿರ್ಧಾರ ಜಾರಿಗೆ ಬರಲಿದ್ದು, ರಾಜ್ಯದ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ 1,09,69,255 ಫಲಾನುಭವಿಗಳಿಗೆ ಇದರಿಂದ ಅನುಕೂಲವಾಗಲಿದೆ. ಹಿರಿಯರು ಸಮಾಜದ ಅಮೂಲ್ಯ ಭಾಗ. ಅವರ ಗೌರವಾನ್ವಿತ ಜೀವನ ಖಚಿತಪಡಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ರಾಜ್ಯ ಸರ್ಕಾರ ಈ ದಿಕ್ಕಿನಲ್ಲಿ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ, ಎಲ್ಲಾ ವೃದ್ಧರು, ಅಂಗವಿಕಲರು ಮತ್ತು ವಿಧವೆಯರು ಈಗ ಪ್ರತಿ ತಿಂಗಳು 400 ರೂ. ಬದಲಿಗೆ 1,100 ರೂ.ಗಳ ಪಿಂಚಣಿ ಪಡೆಯುತ್ತಾರೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗಿದೆ. ಜುಲೈ ತಿಂಗಳಿನಿಂದ ಎಲ್ಲಾ ಫಲಾನುಭವಿಗಳು ಹೆಚ್ಚಿದ ದರದಲ್ಲಿ ಪಿಂಚಣಿ ಪಡೆಯುತ್ತಾರೆ. ಈ ಮೊತ್ತವನ್ನು ತಿಂಗಳ 10 ನೇ ತಾರೀಖಿನಂದು ಎಲ್ಲಾ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು. ಇದು 1.9 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಸಹಾಯಕವಾಗಿದೆ ಎಂದು ಅವರು ತಿಳಿಸಿದ್ದಾರೆ.