ತೆಲಂಗಾಣ : ರಂಗಾರೆಡ್ಡಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ರೈಲ್ವೆ ಹಳಿಯ ಮೇಲೆ ಕಾರನ್ನು ಚಲಾಯಿಸಿದ್ದು, ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಈ ಘಟನೆ ಶಂಕರಪಲ್ಲಿ ಬಳಿ ನಡೆದಿದ್ದು, ಇದರ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ ಕಾರನ್ನು ರೈಲ್ವೆ ಹಳಿಗಳ ಉದ್ದಕ್ಕೂ ಓಡಿಸುವುದನ್ನು ತೋರಿಸಲಾಗಿದೆ.
ಮೂಲಗಳ ಪ್ರಕಾರ, ಆ ವಾಹನವನ್ನು ಮಹಿಳೆಯೊಬ್ಬರು ಚಲಾಯಿಸುತ್ತಿದ್ದರು, ರೈಲ್ವೆ ಸಿಬ್ಬಂದಿ ಹಲವಾರು ಸಿಗ್ನಲ್ಗಳನ್ನು ನೀಡಿದ್ದರೂ ಅವರು ನಿಲ್ಲಿಸಲಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು-ಹೈದರಾಬಾದ್ ರೈಲು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನಂತರ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದರು. ಅಧಿಕಾರಿಗಳು ನಿಯಮ ಉಲ್ಲಂಘನೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ.