ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳ ನಡುವೆ ಹೊಡೆದಾಟ ನಡೆದಿದೆ. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಪ್ರಮಾಣದಲ್ಲಿ ಗಾಯಗಳಾಗಿದ್ದು, ಆತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಳ್ಳಾಲದ ರೌಡಿ ಮುಖ್ತರ್ ಮತ್ತು ಇತರ ಖೈದಿಗಳ ನಡುವೆ ಗಲಾಟೆ ನಡೆದಿದೆ. ಈ ಘಟನೆಯಲ್ಲಿ ರೌಡಿ ಮುಖ್ತರ್ ಅಕ್ಷಯ್ ಕಲ್ಲೇಗ ಕೊಲೆ ಆರೋಪಿ ಕೇಶವ ಎಂಬಾತನ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ ಗಂಭೀರ ಗಾಯಗೊಂಡ ಕೇಶವನನ್ನು ವೆನ್ಲಾಕ್ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.
ಖೈದಿ ಗಾಯಾಳು ಕೇಶವ ಅಕ್ಷಯ್ ಕಲ್ಲೇಗ ಹತ್ಯೆಯ ಆರೋಪಿ. ಖೈದಿ ಮುಖ್ತರ್ ಮೇಲೆ ಈಗಾಗಲೇ 15 ,ಕ್ಕೂ ಹೆಚ್ಚು ಪ್ರಕರಣಗಳಿದ್ದು, 2022 ರಲ್ಲಿ ಆತನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಸಂಬಂಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
				 
         
         
         
															 
                     
                     
                     
                    


































 
    
    
        