ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ರಾಜ್ಯವಲಯದ ಆಸ್ಪತ್ರೆಗಳಲ್ಲಿ ಖಾಲಿ ಇರುವ 6,770 ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆಯಡಿ ಭರ್ತಿ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆದೇಶದಲ್ಲಿ 2019-20ನೇ ಸಾಲಿಗೆ ಆಸ್ಪತ್ರೆಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳಲ್ಲಿ 30% ನಾನ್-ಕ್ಲಿನಿಕಲ್ ಹಾಗೂ 45% ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ 75% ಮೀರದಂತೆ ಈ ಹಿಂದಿನ ಟೆಂಡರ್ ನಿಯಮಗಳನ್ನು ಪಾಲಿಸಿಕೊಂಡು ಹಾಗೂ ಹೊರಗುತ್ತಿಗೆ ಟೆಂಡರ್ ಕರೆಯಲು ಆದೇಶಿಸಲಾಗಿದೆ.