ಹುಬ್ಬಳ್ಳಿ: ಸಿಎಂ ಸಿದ್ಧರಾಮಯ್ಯ ಅವರು ಸಾರ್ವಜನಿಕವಾಗಿ ಪೊಲೀಸ್ ಅಧಿಕಾರಿಗೆ ಕೈ ಎತ್ತಿದ ಪ್ರಕರಣಕ್ಕೆ ಸಂಬಂಧಿಸಿ ಅವಮಾನಗೊಂಡು ಸ್ವಯಂ ರಾಜೀನಾಮೆ ನೀಡಿದ ಅಚ್ಚರಿ ಘಟನೆಯೊಂದು ನಡೆದಿದೆ.
ಬೆಳಗಾವಿಯಲ್ಲಿ ಇತ್ತೀಚಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವೊಂದು ನಡೆದಿತ್ತು. ಪಕ್ಷದ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವ ವಿಚಾರಕ್ಕೆ ಸಿಟ್ಟಿಗೆದ್ದು ಧಾರವಾಡದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಾರಾಯಣ ಭರಮನಿ ಅವರಿಗೆ ಕೈ ಎತ್ತಿದ್ದಾರೆ. ಇದೀಗ ಅವಮಾನಕ್ಕೆ ಬೇಸತ್ತು ಸ್ವಯಂ ನಿವೃತ್ತಿ ಘೋಷಿಸಿ ಎರಡು ಪುಟಗಳ ರಾಜೀನಾಮೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ತಮಗಾದ ಅವಮಾನದ ಬಗ್ಗೆ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಗೆ ಕೆಟ್ಟ ಹೆಸರು ಬರುವುದನ್ನು ತಪ್ಪಿಸಲು ಪೊಲೀಸ್ ಅಧಿಕಾರಿಯ ಓಲೈಕೆ ನಡೆಯುತ್ತಿದೆ. ದುರಂಹಕಾರಿ ಸಿಎಂ ಸಿದ್ಧರಾಮಯ್ಯನವರ ವರ್ತನೆಯಿಂದ ಅವಮಾನಗೊಂಡು ಓರ್ವ ದಕ್ಷ ಪೊಲೀಸ್ ಅಧಿಕಾರಿ ನಿವೃತ್ತಿ ಘೋಷಿಸಿರೋದು ನಿಜಕ್ಕೂ ನೋವಿನ ಸಂಗತಿ ಎಂದು ಬಿಜೆಪಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.