ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನಾಯಕನಹಳ್ಳಿ ನಿವಾಸಿಯಾಗಿದ್ದ ಹರೀಶ್ (33) ಬಾಬು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು ಇಂದು ಜಿಲ್ಲಾಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಇಎನ್ ಟಿ ವಿಭಾಗದ ಕೊಠಡಿಯಲ್ಲಿಯೇ ಹರೀಶ್ ಇದ್ದಕ್ಕಿದ್ದಂತೆ ಆಸ್ಪತ್ರೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ನೌಕರನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೋಲಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.