ಮೈಸೂರು : ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ ಎಂದು ಸಂಸದ ಯದುವೀರ್ ಒಡೆಯರ್ ಧ್ವನಿಗೂಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಯದುವೀರ್ ಒಡೆಯರ್, ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು ಎಂದು ಆಗ್ರಹಿಸಿದ್ದಾರೆ.
ತಿರುಪತಿ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧ ಮಾಡಬೇಕು. ಇತ್ತೀಚಿಗೆ ಕೆಲವರು ಗೊತ್ತಿದ್ದೋ ಗೊತ್ತಿಲ್ಲದೋ ದೇವಿಯ ಮೂಲ ವಿಗ್ರಹದ ವೀಡಿಯೋ ಮಾಡುತ್ತಿದ್ದಾರೆ. ಇದು ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ಕಾನೂನನ್ನು ಜಾರಿ ಮಾಡಬೇಕು ಎಂದು ತಿಳಿಸಿದ್ದಾರೆ.