ಚಿತ್ರದುರ್ಗ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ 1ನೇ ತರಗತಿಯಿಂದ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮುಸ್ಲಿಂ, ಕ್ರಿಶ್ಚಿಯನ್, ಜೈನ್ , ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಅರ್ಜಿಗಳನ್ನು ಆನ್ಲೈನ್ ವೆಬ್ಸೈಟ್ https://ssp.karnataka.gov.in ಮೂಲಕ ಅರ್ಜಿ ಸಲ್ಲಿಬಹುದು. ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ, ತಾಲೂಕು ಮಾಹಿತಿ ಕೇಂದ್ರ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಭೇಟಿ ನೀಡಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.