ಪಾಟ್ನಾ : ವಿಧಾನಸಭೆ ಚುನಾವಣೆಗೆ ಅಣಿಯಾಗುತ್ತಿರುವ ಬಿಹಾರದ ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಮಾ ಅವರನ್ನು ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಪಾಟ್ನಾದ ಅವರ ಮನೆಯ ಮುಂದೆಯೇ ಗುಂಡಿಕ್ಕಿ ಕೊಂದಿದ್ದಾರೆ. ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ಪನಾಚೆ ಎಂಬ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಖೇಮ್ಮಾ ಮನೆಗೆ ತೆರಳುತ್ತಿದ್ದಾಗದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೋಟೆಲ್ ಪಕ್ಕದಲ್ಲಿರುವ ‘ಟ್ವಿನ್ ಟವರ್’ ಸೊಸೈಟಿಯಲ್ಲಿ ಗೋಪಾಲ್ ಖೇಮ್ಮಾ ವಾಸವಾಗಿದ್ದರು. ಗುಂಡಿನ ದಾಳಿಗೆ ಖೇಮ್ಮಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಗುಂಡು ಮತ್ತು ಶೆಲ್ ಕವಚವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರ ಜತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡ ವಶ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಕೇಂದ್ರ ಎಸ್‌ಪಿ ದೀಕ್ಷಾ ಹೇಳಿದ್ದಾರೆ.
ಮೂರು ವರ್ಷಗಳ ಹಿಂದೆ ಖೇಮ್ಮಾ ಅವರ ಮಗ ಗುಂಜನ್ ಖೇಮ್ಮಾ ಅವರನ್ನು ಕೂಡ ಹೀಗೆ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.