ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವಾಕಾಂಕ್ಷಿ ಪ್ರಮುಖ ತೆರಿಗೆ ಮಸೂದೆ ಒನ್ ಬಿಗ್ ಬ್ಯೂಟಿಫುಲ್ ಬಿಲ್ ಅಮೆರಿಕ ಸಂಸತ್ತು ಕಾಂಗ್ರೆಸ್ನಲ್ಲಿ ಅಂಗೀಕಾರಗೊಂಡಿದೆ.
ಅಮೆರಿಕದ ಕಾಂಗ್ರೆಸ್ ಅತ್ಯಲ್ಪ ಅಂತರದಿಂದ ಪ್ರಮುಖ ತೆರಿಗೆ ಮಸೂದೆಯನ್ನು ಪಾಸ್ ಮಾಡಿದೆಯಾದರೂ ಈ ಬೆಳವಣಿಗೆ ಟ್ರಂಪ್ಗೆ ಪ್ರಮುಖ ರಾಜಕೀಯ ಗೆಲವು ಸಿಕ್ಕಿದೆ ಎಂದು ವಿಶ್ಲೇಷಿಸಲಾಗುತ್ತದೆ. ಇದೂವರೆಗೆ ಸಹಿ ಮಾಡಲಾದ ಮಸೂದೆಗಳ ಪೈಕಿ ಇದು ಅತಿದೊಡ್ಡ ಮಸೂದೆಯಾಗಿದೆ ಎಂದು ಟ್ರಂಪ್ ಬಣ್ಣಿಸಿದ್ದಾರೆ.
ಅಮೆರಿಕವು ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿದ್ದು, ನಾವು ಇದನ್ನು ಮತ್ತಷ್ಟು ಶಕ್ತಿಶಾಲಿಯನ್ನಾಗಿ ಮಾಡುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಶ್ವೇತಭವನ ಕೂಡ ಪ್ರತಿಕ್ರಿಯಿಸಿದ್ದು, ಅಮೆರಿಕದ ಸುವರ್ಣಯುಗ ಆರಂಭವಾಗಿದ್ದು, ಒನ್ ಬಿಗ್ ಬ್ಯೂಟಿಫುಲ್ ಬಿಲ್ ಅಧ್ಯಕ್ಷರ ಸಹಿಗಾಗಿ ಶೀಘ್ರದಲ್ಲೇ ವೈಟ್ಹೌಸ್ಗೆ ಬರಲಿದೆ ಎಂದಿದೆ.