‘ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ನೇಮಕವಾಗಿಲ್ಲ’- ಸಿಎಂ ಕಚೇರಿ ಸ್ಪಷ್ಟನೆ

WhatsApp
Telegram
Facebook
Twitter
LinkedIn

ಬೆಂಗಳೂರು :ಎಐಸಿಸಿಯ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.‌ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ ಎಂದು ಸಿಎಂ ಕಚೇರಿ ತಿಳಿಸಿದೆ.

ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.‌ ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ಸಭೆಯ ಆತಿಥ್ಯವನ್ನು ಮುಖ್ಯಮಂತ್ರಿಗಳು ವಹಿಸಿಕೊಂಡಿದ್ದಾರೆ. ಸಭೆ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿದೆ. ವಿವಿಧ ರಾಜ್ಯಗಳ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon