ಚಿತ್ರದುರ್ಗ: ನಗರಸಭೆ ಉಪಾಧ್ಯಕ್ಷರಾಗಿದ್ದ ಜಿ.ಎಸ್.ಶ್ರೀದೇವಿ ಅವರು ಮಂಗಳವಾರ ಜಿಲ್ಲಾಧಿಕಾರಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಉಪಾಧ್ಯಕ್ಷೆ ಸ್ಥಾನವನ್ನು ತೇಜಿಸಿದ್ದಾರೆ.
ಚಿತ್ರದುರ್ಗ ನಗರಸಭೆ ವ್ಯಾಪ್ತಿಯ ವಾರ್ಡ್ ನಂ:33 ರ ಸದಸ್ಯಳಾಗಿ ಆಯ್ಕೆಯಾಗಿದ್ದ ಜಿ.ಎಸ್.ಶ್ರೀದೇವಿ ಕಳೆದ 2024 ರ ಆಗಸ್ಟ್ ತಿಂಗಳಲ್ಲಿ ನಗರಸಭೆಯ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ 11 ತಿಂಗಳುಗಳ ಕಾಲ ಕಾರ್ಯನಿರ್ವಹಿಸಿದ್ದರು.
ಅವರು ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಉಪಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ಸಾಧ್ಯವಾಗದೇ ಇರುವುದರಿಂದ ಉಪಾಧ್ಯಕ್ಷ ಸ್ಥಾನಕ್ಕೆ ಸ್ವ-ಇಚ್ಚೆಯಿಂದ ರಾಜೀನಾಮೆ ನೀಡಿರುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ