ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ವಿಚಾರಣೆ ನಡೆದಿದೆ. ಸಿಎಂ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆ ನೋಟಿಸ್ ಜಾರಿಗೊಳಿಸಲು ಕೋರ್ಟ್ ಆದೇಶ ಹೊರಡಿಸಿದೆ. ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ ನೋಟಿಸ್ ನೀಡಲು ಸೂಚಿಸಿದ ಕೋರ್ಟ್ ವಿಚಾರಣೆಯನ್ನ ಸೆ.4 ಕ್ಕೆ ಮುಂದೂಡಿದೆ. ನ್ಯಾ.ವಿ ಕಾಮೇಶ್ವರ ರಾವ್ ಹಾಗೂ ನ್ಯಾ. ಸಿಎಂ ಜೋಶಿ ಅವರಿದ್ದ ಪೀಠ ಆದೇಶ ಹೊರಡಿಸಿದೆ.
