ಬೆಂಗಳೂರು: ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಪಣತೊಟ್ಟಿದ್ದು, ಆರೋಗ್ಯ ಇಲಾಖೆ 100 ದಿನಗಳ ಕಾರ್ಯಯೋಜನೆ ರೂಪಿಸಿದೆ.
ಡೆಂಗ್ಯೂ ಖಾಯಿಲೆಗಳ ಪರಿಣಾಮಕಾರಿಯಾಗಿ ನಿಯಂತ್ರಿಸಲು ವಿಶೇಷ ಅಭಿಯಾನ ರೂಪದಲ್ಲಿ ಮುಂಜಾಗ್ರತಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ನೀರಿನ ಮೂಲಗಳಲ್ಲೇ ಲಾರ್ವಾ ನಿರ್ಮೂಲನೆಗೆ ರಾಜ್ಯಾದ್ಯಂತ 1500 ಸ್ವಯಂ ಸೇವಕರನ್ನು ನೇಮಿಸಿ ವಿವಿಧ ಕ್ರಮಗಳಿಗಾಗಿ ಒಟ್ಟು 7.25 ಕೋಟಿ ರೂ. ವೆಚ್ಚ ಮಾಡುವ ಪ್ರಸ್ತಾಪಕ್ಕೆ ಇಲಾಖೆ ಅನುಮೋದನೆ ನೀಡಿದೆ. ಇದನ್ನೂ ಓದಿ: ಅಹಮದಾಬಾದ್ ವಿಮಾನ ದುರಂತ ಪ್ರಕರಣ; ಪ್ರಾಥಮಿಕ ವರದಿ ಬಹಿರಂಗ ರೋಗ ಹರಡುವ ವೈರಾಣುಗಳನ್ನು ಪತ್ತೆ ಮಾಡಲು ತಂತ್ರಜ್ಞಾನದ ಅಳವಡಿಕೆ, ಈಡಿಸ್ ಲಾರ್ವಾ ನಿರ್ಮೂಲನೆಗೆ ಸ್ವಯಂ ಸೇವಕರ ನಿಯೋಜನೆ, ಡೆಂಗ್ಯೂ ಪರೀಕ್ಷೆಗೆ ಕಿಟ್ಗಳ ಖರೀದಿ ಸೇರಿ ವಿವಿಧ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.