ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾ.ಮೈಕೆಲ್ ಡಿ.ಕುನ್ಹಾ ನೇತೃತ್ವದ ತನಿಖಾ ಆಯೋಗ ವರದಿ ಸಲ್ಲಿಸಿದ್ದು, ಹಲವಾರು ಅಂಶಗಳನ್ನು ಉಲ್ಲೇಖಿಸಿದೆ.
ಕಾಲ್ತುಳಿತ ಪ್ರಕರಣಕ್ಕೆ ಕೆಎಸ್‌ಸಿಎ, ಆರ್‌ಸಿಬಿ, ಡಿಎನ್‌ಎ ಹಾಗೂ ಪೊಲೀಸರೇ ನೇರ ಹೊಣೆ. ವರದಿಯಲ್ಲಿ ವಿಜಯೋತ್ಸವ ಕಾರ್ಯಕ್ರಮ ನಡೆಸುವುದು ಅಸಾಧ್ಯ ಎಂಬುವುದು ಗೊತ್ತಿದ್ದರೂ ಎಲ್ಲರೂ ಶಾಮೀಲಾಗಿ ಕಾರ್ಯಕ್ರಮ ನಡೆಸಿದ್ದರು ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಬಂದೋಬಸ್ತ್ ವ್ಯವಸ್ಥೆ ಸರಿಯಾಗಿ ಮಾಡಿರಲಿಲ್ಲ. ಜನರು ಸಮಾರಂಭಕ್ಕೆ ಬರುತ್ತಿದ್ದಂತೆ ನುಗ್ಗುತ್ತಿದ್ದಂತೆ ಕಾಲ್ತುಳಿತ ದುರಂತ ಸಂಭವಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.