ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ನಿರಂತರವಾಗಿ ಮುಂಗಾರು ಮಳೆ ಆಗುತ್ತಿದ್ದು, ಮುಂದಿನ ಮೂರ್ನಾಲ್ಕು ದಿನಗಳ ಕಾಲ ಇದೇ ಹವಾಮಾನ ಇರಲಿದೆ. ಜುಲೈ 14 ರಿಂದ 16 ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ಅವಧಿಯಲ್ಲಿ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.