ಸೌತ್ ವೆಸ್ಟರ್ನ್ ರೈಲ್ವೆಯಲ್ಲಿ ಅಗತ್ಯವಿರುವ 904 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಹುಬ್ಬಳ್ಳಿ, ಬೆಂಗಳೂರು, ಮೈಸೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು. ಸೌತ್ ವೆಸ್ಟರ್ನ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ವೆಲ್ಡರ್, ಇಲೆಕ್ಟ್ರೀಷಿಯನ್, ರೆಪ್ರಿಜರೇಷನ್ & ಏರ್ ಕಂಡೀಷನರ್ ಮೆಕ್ಯಾನಿಕ್, ಟರ್ನರ್, ಮಶಿನಿಷ್ಟ್, ಪೇಂಟರ್, ಕಾರ್ಪೆಂಟರ್, ಪ್ರೋಗ್ರಾಮಿಂಗ್ & ಸಿಸ್ಟಮ್ ಅಡ್ಮಿನಿಸ್ಟ್ರೇಷನ್ ಅಸಿಸ್ಟಂಟ್ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 13, 2025 ಕೊನೆಯ ದಿನಾಂಕವಾಗಿರುತ್ತದೆ.
ಹುದ್ದೆ : ಅಪ್ರೆಂಟಿಸ್ಒಟ್ಟು ಹುದ್ದೆಗಳು : 904ಹುಬ್ಬಳ್ಳಿ ಡಿವಿಷನ್ -237ಕ್ಯಾರೇಜ್ ರಿಪೇರ್ ವರ್ಕಶಾಪ್, ಹುಬ್ಬಳ್ಳಿ -217ಬೆಂಗಳೂರು ಡಿವಿಷನ್ -230ಮೈಸೂರು ಡಿವಿಷನ್ -177ಸೆಂಟ್ರಲ್ ವರ್ಕಶಾಪ್, ಮೈಸೂರು -43
ವಿದ್ಯಾರ್ಹತೆ :ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ :ದಿನಾಂಕ 13 ಆಗಸ್ಟ್ 2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆ ವಿಧಾನ :ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ :ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 100 (ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇರುವುದಿಲ್ಲ.) (ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)