ನವದೆಹಲಿ : ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 6 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಅಬುಜ್ಮದ್ ಪ್ರದೇಶದ ಕಾಡಿನಲ್ಲಿ ಇಂದು ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿತ್ತು. ಈ ಪ್ರದೇಶದಲ್ಲಿ ನಕ್ಸಲರ ಉಪಸ್ಥಿತಿಯ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು” ಎಂದು ತಿಳಿಸಿದ್ದಾರೆ.
“ಮಧ್ಯಾಹ್ನದಿಂದ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಅನೇಕ ಗುಂಡಿನ ಚಕಮಕಿಗಳು ನಡೆದಿವೆ. ಇಲ್ಲಿಯವರೆಗೆ ಎನ್‌ಕೌಂಟರ್ ಸ್ಥಳದಿಂದ 6 ಮಾವೋವಾದಿಗಳ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೇ, ಎಕೆ-47 ಸೇರಿದಂತೆ ಇತರ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳು ಮತ್ತು ದಿನನಿತ್ಯ ಬಳಸುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ” ಎಂದರು.