ವಾಷಿಂಗ್ಟನ್ : ವ್ಯಾಪಾರ ಬೆದರಿಕೆ ಹಾಕಿ ಭಾರತ ಮತ್ತು ಪಾಕಿಸ್ತಾನ ಯುದ್ಧ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.
ಶ್ವೇತಭವನದಲ್ಲಿ ಕೆಲವು ರಿಪಬ್ಲಿಕನ್ ಶಾಸಕರೊಂದಿಗೆ ಭೋಜನಕೂಟದಲ್ಲಿ ಮಾತನಾಡಿದ ಅವರು, ಕದನ ವಿರಾಮ ನನ್ನಿಂದಲೇ ಆಗಿದ್ದು. ವ್ಯಾಪಾರ ಬೆದರಿಕೆಯನ್ನು ಬಳಸಿಕೊಂಡು ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ತಿಳಿಸಿದ್ದಾರೆ.
ಪಹಲ್ಗಾಮ್ ದಾಳಿಯ ನಂತರ ಭಾರತ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ಪ್ರಾರಂಭಿಸಿತು. ಮೇ ತಿಂಗಳಲ್ಲಿ ಭಾರತ-ಪಾಕಿಸ್ತಾನ ನಡುವಿನ ಯುದ್ಧದ ಸಮಯದಲ್ಲಿ ಸುಮಾರು 4-5 ಜೆಟ್‌ಗಳನ್ನು ಹೊಡೆದುರುಳಿಸಲಾಯಿತು ಎಂದರು.
ಎರಡು ಪರಮಾಣು ಶಸ್ತ್ರಸಜ್ಜಿತ ದೇಶಗಳ ನಡುವಿನ ಕದನ ವಿರಾಮಕ್ಕೆ ವ್ಯಾಪಾರ ಬೋಗಿಯನ್ನು ಬಳಸಿಕೊಂಡು ಮಧ್ಯಸ್ಥಿಕೆ ವಹಿಸಿದ್ದೇನೆ ಎಂದು ಮತ್ತೊಮ್ಮೆ ಟ್ರಂಪ್ ಹೇಳಿದ್ದಾರೆ.