ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಯ ಆಸಕ್ತ ರೈತರಿಗೆ ವೈಜ್ಞಾನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ಇದೇ ಜುಲೈ 23 ರಿಂದ 25 ರವರೆಗೆ ಮೂರು ದಿನಗಳ ಉಚಿತ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜುಲೈ 23ರಂದು ಬೆಳಿಗ್ಗೆ 10ಕ್ಕೆ ಹಿರಿಯೂರು ಪಶು ಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ನಾಗರಾಜ್, ಹೊಸಯಳನಾಡು ಪಶು ಆಸ್ಪತ್ರೆ ಹಿರಿಯ ಪಶು ವೈದ್ಯಾಧಿಕಾರಿ ಡಾ.ಗುರುಪ್ರಸಾದ್ ಅವರು ವೈಜ್ಞಾನಿಕ ಹೈನುಗಾರಿಕೆ ಪದ್ದತಿ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ.
ಜುಲೈ 24ರಂದು ಚಿತ್ರದುರ್ಗ ಪಶುಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ದೊಡ್ಡಮಲ್ಲಯ್ಯ, ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ.ಮುರುಗೇಶ್ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ಪದ್ದತಿ ಕುರಿತು ಮಾಹಿತಿ ನೀಡಲಿದ್ದಾರೆ.
ಜುಲೈ 25ರಂದು ಹಿರಿಯೂರು, ಸೂಗೂರು, ಕಾಂತ್ರಿಕೇನಹಳ್ಳಿಯ ವಿವಿಧ ಪ್ರಗತಿಪರ ರೈತರ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ತಾಕುಗಳಿಗೆ ರೈತರನ್ನು ಕರೆದುಕೊಂಡು ಹೋಗಲಾಗುವುದು. ಪ್ರಯುಕ್ತ ಆಸಕ್ತ 40 ಜನ ರೈತ ಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
ಮೊದಲು ನೋಂದಾವಣಿ ಮಾಡಿಕೊಂಡ 40 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್ಐಡಿಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರಬೇಕು ಎಂದು ಪ್ರಕಟಣೆ ತಿಳಿಸಿದೆ.