ಮಂಗಳೂರು: ರಾಜ್ಯ ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22 ರವರೆಗೆ ನಡೆಯಲಿದೆ.
ಮಂಗಳೂರಿನಲ್ಲಿ ಈ ಕುರಿತಾಗಿ ಮಾಹಿತಿ ನೀಡಿದ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ವಿಧಾನಸಭೆ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22 ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಅಗತ್ಯ ಬಿದ್ದರೆ ಅಧಿವೇಶನ ಅವಧಿಯನ್ನು ವಿಸ್ತರಿಸುವ ಕುರಿತಂತೆ ಸ್ಪೀಕರ್ ಅಧ್ಯಕ್ಷತೆಯ ಮತ್ತು ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕರನ್ನು ಒಳಗೊಂಡ ಸಲಹಾ ಸಮಿತಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.