ಕಲಬುರಗಿ: ನಾಲ್ವರು ಅಪ್ರಾಪ್ತ ಬಾಲಕರಿಂದಲೇ 9 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವ ಆಘಾತಕಾರಿ ಘಟನೆ ಕಲಬುರಗಿ ನಗರದ ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
‘ಚಂದ್ರಯಾನ 3’ ಉಡಾವಣೆಗೆ ಮುಹೂರ್ತ ಫಿಕ್ಸ್ ; ಜುಲೈ 14ಕ್ಕೆ ನಭದತ್ತ ಯಾನ
ಬುಧವಾರ ಮಧ್ಯಾಹ್ನ ನಡೆದಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕರು ಬಾಲಕಿಯನ್ನು ಮನೆ ಮೇಲಿನ ಟೆರೆಸ್ಸಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅಸ್ವಸ್ಥಳಾದ ಬಾಲಕಿಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೀಗ ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.