ಬೆಂಗಳೂರು: ಉಗ್ರ ಸಂಘಟನೆ ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಗುಜರಾತ್ ಪೊಲೀಸ್ ಭಯೋತ್ಪಾದನ ನಿಗ್ರಹ ದಳ ಬಂಧಿಸಿದೆ.
ಆರೋಪಿಯನ್ನು ಜಾರ್ಖಂಡ್ ಮೂಲದ ಶಮಾ ಪರ್ವೀನ್(30) ಎಂದು ಗುರುತಿಸಲಾಗಿದೆ. ಈಕೆ ಹೆಬ್ಬಾಳದ ಮನೋರಾಯಪಾಳ್ಯದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು.
ಈಕೆ ಭಯೋತ್ಪಾದನೆ ಕಡೆಗೆ ಯುವ ಜನರನ್ನು ಸೆಳೆಯುವುದಕ್ಕಾಗಿ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಪೋಸ್ಚ್ಗಳನ್ನು ಬಿತ್ತರಿಸುವ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.