ಬೆಂಗಳೂರು: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೋರಿ ಕೆಎಂಎಫ್ ನಿಯೋಗದಿಂದ ಜುಲೈ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಾಗುವುದು.
ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ನೇತೃತ್ವದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಾಲಿನ ದರ 14 ರೂಪಾಯಿಯಷ್ಟು ಕಡಿಮೆ ಇದೆ ಹಾಲಿನ ದರ ಹೆಚ್ಚಳ ಮಾಡಿದ ಕಾರಣ ರೈತರು ಜಿಲ್ಲಾ ಒಕ್ಕೂಟಗಳಿಗೆ ಹಾಲು ಕೊಡಲು ಹಿಂದೇಟು ಹಾಕುತ್ತಿದ್ದು, ಇದರಿಂದ ಪ್ರತಿದಿನ 8 ಲಕ್ಷ ಲೀಟರ್ ನಷ್ಟು ಹಾಲು ಖಾಸಗಿಯವರ ಪಾಲಾಗುತ್ತದೆ ಎಂಬ ಮಾಹಿತಿಯನ್ನು ಸಿಎಂ ಗಮನಕ್ಕೆ ತರಲಾಗುವುದು. ಇದೇ ಪರಿಸ್ಥಿತಿ ಮುಂದುವರೆದರೆ ಹಾಲು ಸಂಗ್ರಹ ಕಡಿಮೆಯಾಗುತ್ತದೆ. ರೈತರಿಗೆ ಹೆಚ್ಚು ಹಣ ನೀಡಲು ಹಾಲಿನ ದರ ಹೆಚ್ಚಳಕ್ಕೆ ಅನುಮತಿ ನೀಡಬೇಕೆಂದು ಸಿಎಂಗೆ ಮನವಿ ಮಾಡಲಿದ್ದು, ಜು. 11 ರಂದು ನಿಯೋಗ ತೆರಳಲು ತೀರ್ಮಾನಿಸಲಾಗಿದೆ.