ಮೈಸೂರು: ದೂರಿನ ಮಾಹಿತಿ ಪಡೆಯಲು ಬಂದಿದ್ದ ಪೊಲೀಸ್ ಸಿಬ್ಬಂದಿ ಮುಂದೆ ಮಹಿಳೆ ಸೀರೆ ಬಿಚ್ಚಿ ಅನುಚಿತ ವರ್ತನೆ ತೋರಿದ ಘಟನೆ ನಂಜನಗೂಡು ತಾಲೂಕಿನ ಶಿರಮಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿರಮಳ್ಳಿ ಗ್ರಾಮದ ರತ್ನಮ್ಮ ಎಂಬ ಮಹಿಳೆಯ ಕುಟುಂಬಕ್ಕೆ ಬಹಿಷ್ಕಾರ ಹೇರಿದ್ದಾರೆಂಬ ಆರೋಪದಡಿ ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ರತ್ನಮ್ಮ, ಎಸ್ಪಿ ಕಚೇರಿಯಲ್ಲೂ ದೂರು ದಾಖಲಿಸಿದ್ದರು. ಈ ದೂರಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಹುಲ್ಲಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ರತ್ಮಮ್ಮ ಮನೆಗೆ ಹೋಗಿದ್ದರು.
ಈ ವೇಳೆ ಮೊಬೈಲ್ ನಲ್ಲಿ ವೀಡಿಯೋ ಮಾಡುತ್ತಿದ್ದ ರತ್ನಮ್ಮ ಪೊಲೀಸ್ ಸಿಬ್ಬಂದಿ ಎದುರೇ ನಡುರಸ್ತೆಯಲ್ಲಿ ಸಾರ್ವಜನಿಕರ ಮುಂದೆ ತನ್ನ ಸೀರೆಯನ್ನು ತಾನೇ ಬಿಚ್ಚಿಕೊಂಡು ಹುಚ್ಚಾಟ ಮೆರೆದಿದ್ದಾರೆ.
ರತ್ನಮ್ಮ ವಿರುದ್ದ ಹುಲ್ಲಹಳ್ಳಿ ಹಾಗೂ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆಯೇ ಕೆಲವು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.