ರಾಂಚಿ : ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸ್ಥಾಪಕರಲ್ಲಿ ಒಬ್ಬರಾದ ಶಿಬು ಸೊರೇನ್(81) ನಿಧನರಾಗಿದ್ದಾರೆ.
ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಪರಿಸ್ಥಿತಿ ಇತ್ತೀಚೆಗೆ ಗಂಭೀರವಾಗಿತ್ತು. ಈ ಹಿನ್ನೆಲೆ ಕಳೆದ ಕೆಲ ದಿನಗಳಿಂದ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು ಎಂದು ವರದಿಯಾಗಿದೆ.
ತಂದೆಯ ನಿಧನದ ಮಾಹಿತಿಯನ್ನು ಪುತ್ರ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ತಮ್ಮ ಎಕ್ಸ್ ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ. ‘ಪ್ರೀತಿಯ ದಿಶೋಮ್ ಗುರೂಜಿ ನಮ್ಮನ್ನ ಅಗಲಿದ್ದಾರೆ. ನಾನಿಂದು ಎಲ್ಲವನ್ನೂ ಕಳೆದುಕೊಂಡೆ’ ಎಂಬ ಭಾವುಕ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.