ಬೆಂಗಳೂರು : ಲೋಕಸಭೆ ಚುನಾವಣೆ ವೇಳೆ ಕರ್ನಾಟಕದಲ್ಲಿ ಮತ ಕಳ್ಳತನ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಸಂಸತ್ ಆವರಣದಲ್ಲಿ ಗಂಭೀರ ಆರೋಪ ಮಾಡಿದ್ದರು.
ಈ ವಿಚಾರವಾಗಿ ಪ್ರತಿಭಟನೆ ಮಾಡಲು ಕಾಂಗ್ರೆಸ್ ಮುಂದಾಗಿತ್ತು. ಆದರೆ ಫ್ರೀಡಂ ಪಾರ್ಕ್ನಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ ನೇತೃತ್ವದ ಪ್ರತಿಭಟನಾ ರ್ಯಾಲಿ ಆಗಸ್ಟ್ 8ಕ್ಕೆ ಮುಂದೂಡಿಕೆಯಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ್ದರು. ಕೇಂದ್ರದ ಈ ಕ್ರಮ ವಿರೋಧಿಸಿ ಆಗಸ್ಟ್ 5ರಂದು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಿಗದಿಯಾಗಿತ್ತು. ಇದೇ ಸಮಯದಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ನಡುವೆ ಪ್ರತಿಭಟನಾ ರ್ಯಾಲಿ ಮುಂದೂಡಿರುವುದಾಗಿ ಡಿಸಿಎಂ ಡಿಕೆಶಿ ತಿಳಿಸಿದ್ದಾರೆ.