ಚಿತ್ರದುರ್ಗ : ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆಗಸ್ಟ್ 15 ರಿಂದ ಎಂಡೋಸ್ಕೋಫಿ ಮತ್ತು ಸ್ತನ ಕ್ಯಾನ್ಸರ್ ಚಿಕಿತ್ಸೆ ಘಟಕಗಳು ಆರಂಭವಾಗಲಿವೆ. ಈಗಾಗಲೇ ಎಂಡೋಸ್ಕೋಫಿ ಉಪಕರಣಗಳು ಬಂದಿದ್ದು, ಇವುಗಳನ್ನು ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪನೆಯಾಗಿದ್ದು, ತಜ್ಞ ವೈದ್ಯರನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮಾಹಿತಿ ನೀಡಿದರು.
ಮಂಗಳವಾರ ಜಿಲ್ಲಾ ಆಸ್ಪತ್ರೆಯ ಆವರಣದ ಬಿ.ಸಿ. ರಾಯ್ ಸಭಾಂಗಣದಲ್ಲಿ 2024-25ನೇ ಸಾಲಿನ ಜಿಲ್ಲಾ ಆಸ್ಪತ್ರೆಯ ಕಾರ್ಯಸಾಧನೆ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ಹುಬಳ್ಳಿ ಕ್ಯಾನ್ಸರ್ ಆಸ್ಪತ್ರೆ ಸಹಯೋಗದಲ್ಲಿ 15 ರೋಗಿಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿಯೇ ಕಿಮೋಥೆರಪಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರತರವಾದ ಉಸಿರಾಟ ತೊಂದರೆ ಇರುವ ರೋಗಿಗಳ ಚಿಕಿತ್ಸೆಗಾಗಿ 10 ಬೆಡ್‍ಗಳ ವೆಂಟಿಲೇಟರ್ ಸೇವೆಯನ್ನು ಆರಂಭಿಸಲಾಗಿದೆ. ಅಪಘಾತ ಮತ್ತು ತುರ್ತು ಸಂದರ್ಭದಲ್ಲಿ ಉನ್ನತ ಚಿಕಿತ್ಸೆ ನೀಡಲು ಅನುವಾಗುವಂತೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ತಲಾ 50 ಹಾಸಿಗೆ ಸಾಮಥ್ರ್ಯವುಳ್ಳ ಕ್ರಿಟಿಕಲ್ ಕೇರ್ ಯುನಿಟ್ ಮತ್ತು ಟ್ರಾಮಾ ಕೇರ್ ಸೆಂಟರ್ ಸ್ಥಾಪನೆ ಮಾಡುವುದಾಗಿ ರಾಜ್ಯ ಸರ್ಕಾರ ಬಜೆಟ್‍ನಲ್ಲಿ ಘೋಷಿಸಿದೆ. ಇದರೊಂದಿಗೆ ಕೆ.ಎಮ್.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ) ಅನುದಾನದಲ್ಲಿ 180 ಹಾಸಿಗೆ ಸಾಮಥ್ರ್ಯವುಳ್ಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಡಾ. ರವೀಂದ್ರ ಮಾಹಿತಿ ನೀಡಿದರು.
2024 ಏಪ್ರಿಲ್ ನಿಂದ 2025 ಮಾರ್ಚ್ ವರೆಗೆ ಜಿಲ್ಲಾ ಆಸ್ಪತ್ರೆಯಲ್ಲಿ 3,99,763 ಹೊರ ರೋಗಿಗಳು ಹಾಗೂ 58,352 ಒಳರೋಗಿಗಳು ಚಿಕಿತ್ಸೆ ಪಡೆದಿದ್ದಾರೆ. ಇದರಲ್ಲಿ ಎ.ಬಿ.ಆರ್.ಕೆ (ಆಯμÁ್ಮನ್ ಭಾರತ ಆರೋಗ್ಯ ಕರ್ನಾಟಕ) ಅಡಿ 31,270 ಒಳರೋಗಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ ನೀಡಲಾಗಿದೆ. 1,911 ಜನರಲ್ ಸರ್ಜರಿ, 1,280 ಮೂಳೆ, 1,300 ಹೃದಯ ಸಂಬಂಧಿ, 1,045 ಕಣ್ಣಿನ ಪೆÇರೆ ಮತ್ತು ಇತರೆ ಕಣ್ಣಿನ ಶಸ್ತ್ರಚಿಕಿತ್ಸೆ, 465 ಕುಟುಂಬ ನಿಯಂತ್ರಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಜಿಲ್ಲಾ ಆಸ್ಪತ್ರೆಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ 6,645 ಹೆರಿಗೆಗಳನ್ನು ಮಾಡಿಸಲಾಗಿದೆ. ಇದರಲ್ಲಿ 2,044 ಸಹಜ ಹೆರಿಗೆ 4,061 ಸಿಜೇರಿಯನ್ ಹೆರಿಗೆಗಳನ್ನು ಮಾಡಲಾಗಿದೆ. 412 ಹಾವು ಕಡಿತ, 2736 ರಸ್ತೆ ಅಪಘಾತ ಮತ್ತು ಗಾಯದ ಪ್ರಕರಣಗಳು, 53 ಸುಟ್ಟಗಾಯಗಳ ಪ್ರಕರಣಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಶಸ್ತ್ರಚಿಕಿತ್ಸಕರು ಹಾಗೂ ವೈದ್ಯರು ಬೇರೆಡೆಗೆ ರೋಗಿಗಳನ್ನು ಶಿಫಾರಸ್ಸು ಮಾಡುವುದನ್ನು ತಡೆಗಟ್ಟಲಾಗುತ್ತಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚಿನ ಶಸ್ತ್ರಚಿಕಿತ್ಸೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಅವಧಿ ಮುನ್ನ, ಕಡಿಮೆ ತೂಕ ಸೇರಿದಂತೆ ಹಲವು ತೊಂದರೆಗಳಿರುವ 2,391 ನವಜಾತ ಶಿಶುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಪೌಷ್ಠಿಕ ಮಕ್ಕಳ ಆರೈಕೆಗೆ 10 ಬೆಡ್‍ಗಳ ಎನ್‍ಆರ್‍ಸಿ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಪ್ರಸಕ್ತ ವರ್ಷದಲ್ಲಿ 250 ಮಕ್ಕಳಿಗೆ ವಿಶೇಷ ಆರೈಕೆಯನ್ನು ನೀಡಲಾಗಿದೆ. ಕಿಡ್ನಿ ವೈಪಲ್ಯಗೊಂಡ 100 ರಿಂದ 120 ರೋಗಿಗಳಿಗೆ ಉಚಿತವಾಗಿ ಡಯಾಲಿಸ್ ಮಾಡಲಾಗುತ್ತಿದೆ. ಡಯಾಲಿಸಿಸ್ ಕೇಂದ್ರದ ಕಾರ್ಯಕ್ಷಮತೆಯನ್ನು ದ್ವಿಗುಣಗೊಳಿಸಲಾಗಿದೆ. ವರ್ಷದಲ್ಲಿ 9,810 ಸೈಕಲ್‍ನಷ್ಟು ಡಯಾಲಿಸಿಸ್ ಮಾಡಲಾಗಿದೆ. ಏಕ ಬಳಕೆಯ ಡಯಾಲಿಸರ್‍ಗಳನ್ನು ಬಳಸುತ್ತಿದ್ದು, ರೋಗಿಗಳ ಆರೋಗ್ಯದ ಕಾಳಜಿ ವಹಿಸಲಾಗುತ್ತಿದೆ. ರಕ್ತದಾನ ಶಿಬಿರ ಹಾಗೂ ಸ್ವಯಂ ಪ್ರೇರಿತ ರಕ್ತದಾನಿಗಳ ನೆರವಿನಿಂದ ರಕ್ತ ನಿಧಿ ಕೇಂದ್ರದಲ್ಲಿ 8,024 ಯನಿಟ್ ರಕ್ತ ಸಂಗ್ರಹಸಿ ಅಗತ್ಯವಿರುವ ರೋಗಿಗಳಿಗೆ ಬಳಸಲಾಗಿದೆ ಎಂದು ಡಾ.ರವೀಂದ್ರ ಮಾಹಿತಿ ನೀಡಿದರು.