ಕೊಪ್ಪಳ: ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕ ಗವಿಸಿದ್ದಪ್ಪ ಎಂಬಾತನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡಲಾಗುವುದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಮಾದರಿಯ ಅಭಿಯಾನ ಆರಂಭಿಸುತ್ತೇವೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಹಿಂದೂಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಮರಲ್ಲಿದೆ. ರಿಲ್ಸ್ನಲ್ಲಿ ಮಚ್ಚು ತೋರಿಸಿದ್ದಾನೆ. ಆಗಲೇ ಪೊಲೀಸರು ಎಚ್ಚೆತ್ತುಕೊಂಡಿದ್ದರೆ, ಈ ಪರಿಸ್ಥಿತಿ ಬರುತ್ತಿರಲಿಲ್ಲ.
ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಗವಿಸಿದ್ದಪ್ಪ ಪ್ರೀತಿಸಿದ್ದ ಹುಡುಗಿಯನ್ನೂ ಬಂಧಿಸಬೇಕು. ಲವ್ ಜಿಹಾದ್ ಮಾಡಿದಾಗ ಮುಸ್ಲಿಮರಿಗೆ ರಕ್ಷಣೆ ನೀಡಲಾಗುತ್ತದೆ. ಈ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಸದನದಲ್ಲಿ ಪ್ರಸ್ತಾಪಿಸುವೆ. ಮಚ್ಚು ತೆಗೆದುಕೊಂಡು ಓಡಾಡುವವರಿಗೆ ರಾಜ್ಯ ಸರ್ಕಾರದ ಬೆಂಬಲವಿದೆ ಎಂದು ವಾಗ್ದಾಳಿ ಮಾಡಿದರು.