ಬೆಳ್ತಂಗಡಿ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಐತಿಹಾಸಿಕ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಚಾರಣ ತೆರಳುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ರಾಜ್ಯ ಬಜೆಟ್ 2023: ಅಲ್ಪಸಂಖ್ಯಾತರ ಶಿಕ್ಷಣ, ಸ್ವಾವಲಂಬನೆಗೆ ಹಲವು ಕಾರ್ಯಕ್ರಮಗಳ ಘೋಷಣೆ
ಧಾರಾಕಾರ ಮಳೆಯಿಂದಾಗಿ ಬಂಡೆಯಲ್ಲಿ ನೀರು ಹರಿಯುತ್ತಿದ್ದು, ಮೆಟ್ಟಿಲುಗಳಲ್ಲಿ ಪಾಚಿ ಬೆಳೆದು ಜಾರುವ ಅಪಾಯ ಇರುವುದರಿಂದ ಜು.7ರಿಂದ ಮುಂದಿನ ಆದೇಶದ ತನಕ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ವನ್ಯಜೀವಿ ವಿಭಾಗದ ಬೆಳ್ತಂಗಡಿ ವಲಯಾರಣ್ಯಧಿಕಾರಿ ಸ್ವಾತಿ ಅವರು ತಿಳಿಸಿದ್ದಾರೆ.